ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದ ಜೀವನಾಡಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ,ಅದಕ್ಕೆ ಅಡ್ಡಲಾಗಿ ಕಟ್ಟಲಾಗಿರುವ ಆಲಮಟ್ಟಿ ಅಣೆಕಟ್ಟು ಗರಿಷ್ಠ ಮಟ್ಟ ತಲುಪಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಸಮರ್ಪಿಸಿದರು.
ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಕೃಷ್ಣೆಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ ಸಂದರ್ಭದಲ್ಲಿ ಉಪಸ್ಥಿತರಿದ್ದರು.