ಮೈಸೂರು ದಸರಾ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ಸಾಂಪ್ರದಾಯಿಕವಾಗಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ‌ 9:45 ರಿಂದ 10:15 ರ ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಸಚಿವ ಎಚ್.ಸಿ ಮಹದೇವಪ್ಪ ಚಾಲನೆ ನೀಡಿದರು.

ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು, ಕಬ್ಬು, ಬೆಲ್ಲ, ಫಲತಾಂಬೂಲ ಇಟ್ಟು ಪೂಜೆ ಸಲ್ಲಿಸಲಾಯಿತು.

ಸ್ಥಳೀಯ ಶಾಸಕ ಹರೀಶ್ ಗೌಡ, ಎಂಎಲ್ ಸಿ ಮಂಜೇಗೌಡ, ಅರಣ್ಯ ಇಲಾಖೆಯ ಅಧಿಕಾರಿ ವರ್ಗ ಮತ್ತು ಜಿಲ್ಲಾಧಿಕಾರಿಗಳು ಕಾರ್ಯಕ್ರಮಲ್ಲಿ ಪಾಲ್ಗೊಂಡಿದ್ದರು.

ನಾಗರಹೊಳೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸಲಿವೆ. ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಕರೆತರಲಾಗುತ್ತದೆ.

ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಆಗಮಿಸಲಿವೆ.

Leave a Reply

Your email address will not be published. Required fields are marked *